Preloader

Loading

image

ಖಾಲಿ ಹುದ್ದೆಗಳ ವಿವರ ಪ್ರಕಟಕ್ಕೆ ನಿರ್ಧಾರ

ಬೆಂಗಳೂರು: ರಾಜ್ಯದ ಪದವಿ ಕಾಲೇಜು ಪ್ರಾಧ್ಯಾಪಕರ ವರ್ಗಾವಣೆಗೆ ಲಭ್ಯವಿರುವ ವಿಷಯವಾರು ಎಲ್ಲ ಖಾಲಿ ಹುದ್ದೆಗಳ ಮಾಹಿತಿ ನೀಡಲು ಸರ್ಕಾರ ನಿರ್ಧರಿಸಿದೆ. ಪ್ರಸ್ತುತ ವರ್ಗಾವಣೆಗೆ ಲಭ್ಯವಿರುವ ಹುದ್ದೆಗಳ ಮಾಹಿತಿಯನ್ನಷ್ಟೇ ನೀಡಲು ಸರ್ಕಾರ ನಿರ್ಧರಿಸಿತ್ತು. ಆದರೆ, ಎಲ್ಲ ಹುದ್ದೆಗಳ ಮಾಹಿತಿ ಪ್ರಕಟಿಸಬೇಕು ಎಂದು ಪ್ರಾಧ್ಯಾಪಕರು ಒತ್ತಾಯಿಸಿದ್ದರು. ವಿಷಯವಾರು ಖಾಲಿ ಇರುವ ಎಲ್ಲ ಹುದ್ದೆಗಳ ಮಾಹಿತಿ ನೀಡಲು ನಿರ್ಧರಿಸಿದೆ. ಸದ್ಯ 1,500 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ಗ್ರಾಮೀಣ ಭಾಗದಲ್ಲಿ ಖಾಲಿ ಉಳಿಯಲಿವೆ. ಇದರಿಂದ ಗ್ರಾಮೀಣ ಭಾಗದ ಮಕ್ಕಳಿಗೆ ಬೋಧಕರು ಇಲ್ಲದೆ ಸಮಸ್ಯೆಯಾಗಲಿದೆ. ಈ ಉದ್ದೇಶದಿಂದ ಪೂರ್ಣ ವಿವರ ನೀಡದಿರಲು ನಿರ್ಧರಿಸಲಾಗಿತ್ತು. ಇದೀಗ ಪೂರ್ಣ ಮಾಹಿತಿಗೆ ಒತ್ತಡ ಬಂದ ಹಿನ್ನೆಲೆಯಲ್ಲಿ ಪದವಿ ಕಾಲೇಜುಗಳಲ್ಲಿ ಲಭ್ಯವಿರುವ ಮಾಹಿತಿ ನೀಡಲಾಗುತ್ತಿದೆ. ಸದ್ಯದಲ್ಲಿಯೇ 1,200 ಸಹಾಯಕ ಪ್ರಾಧ್ಯಾಪಕರ ನೇಮಕವಾಗಲಿದ್ದು, ಅವರನ್ನು ಗ್ರಾಮೀಣ ಭಾಗಕ್ಕೆ ಸ್ಥಳಾವಕಾಶ ಕಲ್ಪಿಸಲಾಗುತ್ತದೆ. ಈ ಮೂಲಕ ಗ್ರಾಮೀಣ ಭಾಗದಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಉದ್ದೇಶ ಹೊಂದಿದೆ. ಆದರೆ, ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿರುವ ಪಾಲಿಟೆಕ್ನಿಕ್ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವರ್ಗಾವಣೆಗೆ ಲಭ್ಯವಿರುವಷ್ಟೇ ಹುದ್ದೆಗಳ ಮಾಹಿತಿಯನ್ನಷ್ಟೇ ನೀಡಲಾಗುತ್ತದೆ ಎನ್ನಲಾಗಿದೆ.

leave your comment


Your email address will not be published. Required fields are marked *

Uploading
Color SWITCHER